ಶುಕ್ರವಾರ, ಅಕ್ಟೋಬರ್ 20, 2017

ಕೆ ಆರ್ ಐ ಡಿ ಎಲ್ ವಿವಿಧ ಹುದ್ದೆಗಳ ನೇಮಕಾತಿಗೆ ಆನ್-ಲೈನ್ ಅರ್ಜಿ ಆಹ್ವಾನ

ಕರ್ನಾಟಕ ರೂರಲ್ ಇನ್ ಪ್ರಾಸ್ಟ್ರಕ್ಚರ್ ಡೆವೆಲಪ್ಮೆಂಟ್ ಲಿಮಿಟಿಡ್ (ಕೆಆರ್ ಐಡಿಎಲ್) ನಲ್ಲಿ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು 91 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಐಟಿಐ, ಪಿಯುಸಿ, ಬಿಎಸ್ಸಿ, ಬಿ.ಕಾಂ, ಬಿ.ಟೆಕ್, ಬಿ.ಇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಹುದ್ದೆಗಳ ವಿವರ
ಸಹಾಯಕ ಅಭಿಯಂತರರು ಗ್ರೇಡ್-1 (ಸಿವಿಲ್) : 17 ಹುದ್ದೆಗಳು

ವೇತನ ಶ್ರೇಣಿ: 22800-43200/-

ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಬಿ.ಇ (ಸಿವಿಲ್) ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು

ಸಹಾಯಕ ಅಭಿಯಂತರರು ಗ್ರೇಡ್-1 (ಎಲೆಕ್ಟ್ರಿಕಲ್): 1ಹುದ್ದೆ


ವೇತನ ಶ್ರೇಣಿ: 22800-43200/-

ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಬಿ.ಇ (ಎಲೆಕ್ಟ್ರಿಕಲ್) ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು


ಕಿರಿಯ ಅಭಿಯಂತರರು (ಸಿವಿಲ್) : 11 ಹುದ್ದೆಗಳು
ವೇತನ ಶ್ರೇಣಿ: 17650-32000/-
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ತಾಂತ್ರಿಕ ಮಂಡಳಿಯಿಂದ ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್ ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

ಅಧೀಕ್ಷಕರು (ಲೆಕ್ಕಪತ್ರ)-08 ಹುದ್ದೆಗಳು
ವೇತನ ಶ್ರೇಣಿ: ರೂ.20000-36300/-
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿಯಲ್ಲಿ ತೇರ್ಗಡೆಯಾಗಿರಬೇಕು. ಎಂ.ಎಸ್ ಆಫೀಸ್ ಹಾಗೂ ಟ್ಯಾಲಿ ಪರಿಜ್ಞಾನ ಹೊಂದಿರಬೇಕು

ಪ್ರಥಮ ದರ್ಜೆ ಸಹಾಯಕರು-07 ಹುದ್ದೆಗಳು 
ವೇತನ ಶ್ರೇಣಿ: ರೂ.14550-26700/- 
ವಿದ್ಯಾರ್ಹತೆ : ಅಂಗೀಕೃತ ವಿಶ್ವವಿಶ್ವವಿದ್ಯಾಲಯದಿಂದ ಯಾವುದಾದರು ಪದವಿಯಲ್ಲಿ ತೇರ್ಗಡೆಯಾಗಿರಬೇಕು. ಎಂ.ಎಸ್ ಆಫೀಸ್, ಎಂ.ಎಸ್ ಎಕ್ಸಿಲ್ ಹಾಗೂ ಟ್ಯಾಲಿ ಪರಿಜ್ಞಾನ ಹೊಂದಿರಬೇಕು.
ದ್ವಿತೀಯ ದರ್ಜೆ ಸಹಾಯಕರು-17 ಹುದ್ದೆಗಳು 
ವೇತನ ಶ್ರೇಣಿ: ರೂ.11600-21000/- 
ವಿದ್ಯಾರ್ಹತೆ: ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ತಾಂತ್ರಿಕ ಮಂಡಳಿಯಿಂದ ಪಿಯುಸಿ ಅಥವಾ ೧೦+೨ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಎಂ.ಎಸ್ ಆಫೀಸ್, ಎಂ.ಎಸ್ ಎಕ್ಸಿಲ್ ಹಾಗೂ ಟ್ಯಾಲಿ ಪರಿಜ್ಞಾನ ಹೊಂದಿರಬೇಕು.

ಸಹಾಯಕ ಕಾರ್ಯ ನಿರೀಕ್ಷಕರು-29 ಹುದ್ದೆಗಳು 
ವೇತನ ಶ್ರೇಣಿ: ರೂ.10400-16400/- 
ವಿದ್ಯಾರ್ಹತೆ : ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ತಾಂತ್ರಿಕ ಮಂಡಳಿಯಿಂದ ಐಟಿಐ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

ವಯೋಮಿತಿ 
ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 35 ವರ್ಷಗಳು. (ಒಬಿಸಿ ವರ್ಗದವರಿಗೆ ಮೂರು ವರ್ಷ ಮತ್ತು ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ ಐದು ವರ್ಷಗಳ ಸಡಿಲಿಕೆ ಇದೆ)

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶವಿದೆ.

ಅರ್ಜಿ ಶುಲ್ಕ
* ಸಾಮಾನ್ಯ ಅಭ್ಯರ್ಥಿಗಳಿಗೆ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.500/-
* ಎಸ್.ಸಿ/ಎಸ್.ಟಿ/ಪ್ರ-1/ಅಂಗವಿಕಲ ಅಭ್ಯರ್ಥಿಗಳಿಗೆ ರೂ.250/-

ಪ್ರಮುಖ ದಿನಾಂಕಗಳು

* ಅರ್ಜಿಗಳನ್ನು ಆನ್-ಲೈನ್ ಮೂಲಕ ಸಲ್ಲಿಸಲು ಪ್ರಾರಂಭ ದಿನಾಂಕ: 25-10-2017
* ಅರ್ಜಿಗಳನ್ನು ಆನ್-ಲೈನ್ ಮೂಲಕ ಸಲ್ಲಿಸಲು ಕೊನೆಯ ದಿನಾಂಕ: 24-11-2017
* ಅಂಚೆ ಕಛೇರಿ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 27-11-2017

ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ http://kridl.org/index.html























ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಇಂಡಿಯನ್ ನೇವಿಯಲ್ಲಿ ಅರ್ಜಿ ಆಹ್ವಾನ... ಈ ಕೂಡಲೇ ಅರ್ಜಿ ಸಲ್ಲಿಸಿ!

ಇಂಡಿಯನ್ ನೇವಿ ನೇಮಕಾತಿ ಹುದ್ದೆಯ ಪ್ರಕಟಣೆ ಹೊರಡಿಸಿದೆ. ಕೆಡೆಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಜೂನ್ 21, 2018 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇಂಡಿಯ...