ಶನಿವಾರ, ಅಕ್ಟೋಬರ್ 21, 2017

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ ನೇಮಕಾತಿ

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಘಟಕದಲ್ಲಿ ಶೀಘ್ರಲಿಪಿಗಾರ, ಬೆಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಜವಾನರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ಚಾನಿಸಲಾಗಿದೆ.

ಒಟ್ಟು 218 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆಸಕ್ತ ಅಭ್ಯರ್ಥಿಗಳು ನವೆಂಬರ್ 15 ರೊಳಗೆ ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ.


ಹುದ್ದೆಗಳ ವಿವರ
ಶೀಘ್ರಲಿಪಿಗಾರ ಹುದ್ದೆಗಳ ಸಂಖ್ಯೆಃ 60
ವೇತನ ಶ್ರೇಣಿ: ರೂ.14550-26700/-

ವಿದ್ಯಾರ್ಹತೆ
ಅರ್ಜಿ ಸಲ್ಲಿಸಲು ನಿಗದಿ ಪಡಿಸಿರುವ ಕಡೆಯ ದಿನಾಂಕದ ಒಳಗಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬೇಕು


ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ (ಸೀನಿಯರ್ ಗ್ರೇಡ್) ಹಾಗೂ ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿ ಪ್ರೌಢ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ಸತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿ ಪಡಿಸಿದರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.

ಟೈಪಿಸ್ಟ್ : 66

ವೇತನ ಶ್ರೇಣಿ: ರೂ.11600-21000/-
ವಿದ್ಯಾರ್ಹತೆ
ಅರ್ಜಿ ಸಲ್ಲಿಸಲು ನಿಗದಿ ಪಡಿಸಿರುವ ಕಡೆಯ ದಿನಾಂಕದ ಒಳಗಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬೇಕು. ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ (ಸೀನಿಯರ್ ಗ್ರೇಡ್) ಅಥವಾ ಸತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿ ಪಡಿಸಿದರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.

ಜವಾನ-62 ಹುದ್ದೆಗಳು
ವೇತನ ಶ್ರೇಣಿ: ರೂ.9600-14550/- 

ವಿದ್ಯಾರ್ಹತೆ:7ನೇ ತರಗತಿ ತೇರ್ಗಡೆ ಹೊಂದಿರಬೇಕು ಕನ್ನಡದಲ್ಲಿ ಓದಲು ಹಾಗೂ ಬರೆಯಲು ತಿಳಿದಿರಬೇಕು

ಆಯ್ಕೆ ವಿಧಾನ

* ಸಾಮಾನ್ಯ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳಿಗೆ: ರೂ.200/-
* ಪ.ಜಾ/ಪ.ಪಂ/ಪ್ರ-1/ಅಂಗವಿಕಲ ಅಭ್ಯರ್ಥಿಗಳಿಗೆ ರೂ.50/-

ಆಯ್ಕೆ ವಿಧಾನ
ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು 45 ನಿಮಿಷಗಳಲ್ಲಿ ತರ್ಜುಮೆ ಮಾಡಿ ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.

ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.


ವಯೋಮಿತಿ

* ಸಾಮಾನ್ಯ ವರ್ಗ: 35 ವರ್ಷ
* ಪ್ರವರ್ಗ 2ಎ, 2ಬಿ, 3ಎ, 3ಬಿ: 38 ವರ್ಷ
* ಪ.ಜಾ, ಪ.ಪಂ, ಪ್ರ-1 : 40 ವರ್ಷ.

ಪ್ರಮುಖ ದಿನಾಂಕಗಳು

* ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15/11/2017, ರಾತ್ರಿ 11.59 ರವರೆಗೂ
* ಶುಲ್ಕ ಪಾವತಿ ಕೊನೆ ದಿನಾಂಕ : 16/11/2017

ಹೆಚ್ಚಿನ ಮಾಹಿತಿಗಾಗಿ ecourts.gov.in ಗಮನಿಸಿ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಇಂಡಿಯನ್ ನೇವಿಯಲ್ಲಿ ಅರ್ಜಿ ಆಹ್ವಾನ... ಈ ಕೂಡಲೇ ಅರ್ಜಿ ಸಲ್ಲಿಸಿ!

ಇಂಡಿಯನ್ ನೇವಿ ನೇಮಕಾತಿ ಹುದ್ದೆಯ ಪ್ರಕಟಣೆ ಹೊರಡಿಸಿದೆ. ಕೆಡೆಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಜೂನ್ 21, 2018 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇಂಡಿಯ...