ಮಂಗಳವಾರ, ನವೆಂಬರ್ 21, 2017

ಎಸ್ ಎಸ್ ಸಿ ನೇಮಕಾತಿ: ದ್ವಿತೀಯ ಪಿಯುಸಿ ಆದವರಿಗೆ ಉದ್ಯೋಗಾವಕಾಶ

ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ ಎಸ್ ಸಿ) ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (ಸಿ ಹೆಚ್ ಎಸ್ ಎಲ್) 3259 ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಲೋಯರ್ ಡಿವಿಷನ್ ಕ್ಲರ್ಕ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್, ಪೋಸ್ಟಲ್ ಅಸಿಸ್ಟೆಂಟ್ ಮತ್ತು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 18 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ
ಲೋಯರ್ ಡಿವಿಷನ್ ಕ್ಲರ್ಕ್/ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್-898
ವೇತನ ಶ್ರೇಣಿ: ರೂ.5200-20200+1900
ವಿದ್ಯಾರ್ಹತೆ: ದ್ವಿತೀಯ ಪಿಯುಸಿ

ಪೋಸ್ಟಲ್ ಅಸಿಸ್ಟೆಂಟ್/ಸಾರ್ಟಿಂಗ್ ಅಸಿಸ್ಟೆಂಟ್-2359
ವೇತನ ಶ್ರೇಣಿ: ರೂ.5200-20200+2400

ವಿದ್ಯಾರ್ಹತೆ: ದ್ವಿತೀಯ ಪಿಯುಸಿ

ಡೇಟಾ ಎಂಟ್ರಿ ಆಪರೇಟರ್-02 
ವೇತನ ಶ್ರೇಣಿ: ರೂ.5200-20200+2400
ವಿದ್ಯಾರ್ಹತೆ: ದ್ವಿತೀಯ ಪಿಯುಸಿ 

ಆಯ್ಕೆ ವಿಧಾನ
ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಈ ಎರಡು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.



ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ಹುದ್ದೆಗೆ ಒಂದೇ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಪ್ರಮುಖ ದಿನಾಂಕಗಳು
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-12-2017
* 
ಟೈರ್-1 ಕಂಪ್ಯೂಟರ್ ಬೇಸ್ಡ್ ಎಕ್ಸಾಮ್: 04-03-2018 ರಿಂದ 26-03-2018
* ಟೈರ್-2 ಎಕ್ಸಾಮ್ (ವಿವರಣಾತ್ಮಕ): 08-07-2018

ಪರೀಕ್ಷಾ ಶುಲ್ಕ* ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.100/-
* ಪ.ಜಾ/ಪ.ಪಂ/ಮಹಿಳೆ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಶುಲ್ಕವನ್ನು ನೆಟ್ ಬ್ಯಾಂಕಿಂಗ್/ಕ್ರೆಡಿಟ್ ಕಾರ್ಡ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸುವುದು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ http://ssc.nic.in/SSC_WEBSITE_LATEST/notice/notice_pdf/chsl2017_english_notice_17112017.pdf

ಆನ್ಲೈನ್ ಅಪ್ಲಿಕೇಶನ್ http://164.100.129.99/chsl2017/

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಇಂಡಿಯನ್ ನೇವಿಯಲ್ಲಿ ಅರ್ಜಿ ಆಹ್ವಾನ... ಈ ಕೂಡಲೇ ಅರ್ಜಿ ಸಲ್ಲಿಸಿ!

ಇಂಡಿಯನ್ ನೇವಿ ನೇಮಕಾತಿ ಹುದ್ದೆಯ ಪ್ರಕಟಣೆ ಹೊರಡಿಸಿದೆ. ಕೆಡೆಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಜೂನ್ 21, 2018 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇಂಡಿಯ...