ಶನಿವಾರ, ಡಿಸೆಂಬರ್ 23, 2017

ಬಿಎಸ್ಎನ್ಎಲ್: 107 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಭಾರತ್ ಸಂಚಾರ್ ನಿಗಮ್ ಲಿಮೆಟೆಡ್ (ಬಿಎಸ್ಎನ್ಎಲ್) ಅಧಿಸೂಚನೆ ಹೊರಡಿಸಿದೆ.
107 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ ಜನವರಿ 15,2018ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.


ಹುದ್ದೆ : ಜೂನಿಯರ್ ಇಂಜಿನಿಯರ್
ಹುದ್ದೆ ಸ್ಥಳ : ಭಾರತದಾದ್ಯಂತ 
ವಯೋಮಿತಿ: 01.07.2016ಕ್ಕೆ ಅನ್ವಯವಾಗುವಂತೆ ಗರಿಷ್ಟ 55 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
 ವಿದ್ಯಾರ್ಹತೆ: ಬಿಇ/ಬಿಟೆಕ್ ಅಥವಾ ತತ್ಸಮಾನ ಪದವಿಯನ್ನು ಟೆಲಿಕಾಂ/ಇಲೆಕ್ಟ್ರಾನಿಕ್ಸ್/ರೇಡಿಯೋ/ಕಂಪ್ಯೂಟರ್/ಎಲೆಕ್ಟ್ರಿಕಲ್/ ಮಾಹಿತಿ ತಂತ್ರಜ್ಞಾನ/ ಇನ್ಸ್ಟ್ರುಮೆಂಟೆಷನ್ ಇಂಜಿನಿಯರಿಂಗ್ ಅಥವಾ ಎಂಎಸ್ಸಿ (ಎಲೆಕ್ಟ್ರಾನಿಕ್ಸ್/ ಕಂಪ್ಯೂಟರ್ಸ್ ಸೈನ್ಸ್)

ಪ್ರಮುಖ ದಿನಾಂಕಗಳು
* ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-01-2018
* ತಿದ್ದುಪಡಿ ದಿನಾಂಕ: 16-01-2018 ರಿಂದ 17-01-2018* ಆನ್ಲೈನ್ ಪರೀಕ್ಷೆ ನಡೆಯುವ ದಿನಾಂಕ: 28-01-2018

ಪರೀಕ್ಷೆ ವಿವರ
ನೂರು ಅಂಕಗಳ ಈ ಪರೀಕ್ಷೆಯು ಎರಡು ಪ್ರಶ್ನೆಪತ್ರಿಕೆಗಳನ್ನು ಒಳಗೊಂಡಿರುತ್ತದೆ. ಉತ್ತರಿಸಲು ಮೂರು ಗಂಟೆಯ ಕಾಲಾವಕಾಶ ನೀಡಲಾಗುತ್ತದೆ.
* ಮೊದಲ ಪತ್ರಿಕೆ: ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ (50 ಅಂಕಗಳು)
* ಎರಡನೇ ಪತ್ರಿಕೆ: ಡಿಪಾರ್ಟ್ಮೆಂಟಲ್ ಪ್ರಾಕ್ಟೀಸ್ (50 ಅಂಕಗಳು)

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಶುಲ್ಕ
* ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.500/-
* ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ರೂ. 250/-

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: http://www.internalbsnlexam.com/advertisement/model_notification_LICEJE.pdf
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ:http://www.internalexam.bsnl.co.in/

ಗುರುವಾರ, ಡಿಸೆಂಬರ್ 7, 2017

ಬಿಎಂಟಿಸಿಯಲ್ಲಿ ವಿವಿಧ 2225 ಹುದ್ದೆಗಳ ನೇಮಕಾತಿಗೆ ಅರ್ಜೆ ಆಹ್ವಾನ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ 2225 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಚಾಲಕ, ನಿರ್ವಾಹಕ, ಸಹಾಯಕ ಸಂಚಾರ ನಿರೀಕ್ಷಿಕ, ಭದ್ರತಾ ರಕ್ಷಕ, ಕುಶಲಕರ್ಮಿ ಹಾಗೂ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ನೇರ ನೇಮಕಾತಿ ನಡೆಯುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದ್ದು, ಇತರೆ ಮೂಲಗಳಿಂದ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಹುದ್ದೆಗಳ ವಿವರ











ಪ್ರಮುಖ ದಿನಾಂಕಗಳು
* ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 11-12-2017
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-12-2017

ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ www.mybmtc.com ಗಮನಿಸಲು ಸೂಚಿಸಲಾಗಿದೆ.

ಬೆಂಗಳೂರಿನ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿ ಜಂಟಿ ನಿರ್ದೇಶಕರ ಹುದ್ದೆ ನೇಮಕಾತಿ


ಬೆಂಗಳೂರಿನ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿ ಖಾಲಿ ಇರುವ ಜಂಟಿ ನಿರ್ದೇಶಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಜ್ಯ ಅಥವಾ ಕೇಂದ್ರ ಸರ್ಕಾರದ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ

ಹುದ್ದೆಯ ಹೆಸರು: ಜಂಟಿ ನಿರ್ದೇಶಕರು
ಹುದ್ದೆ ಸಂಖ್ಯೆ: 02

ವಿದ್ಯಾರ್ಹತೆ
ಭೌತಶಾಸ್ತ್ರ/ರಸಾಯನಶಾಸ್ತ್ರ/ಸಸ್ಯಶಾಸ್ತ್ರ/ಪ್ರಾಣಿಶಾಸ್ತ್ರ/ಗಣಕವಿಜ್ಞಾನ/ಔಷಧಶಾಸ್ತ್ರ/ಇಂಜಿನಿಯರಿಂಗ್/ಡಿಜಿಟಲ್ ಫೊರೆನ್ಸಿಕ್/ ಫೊರೆನ್ಸಿಕ್ ವಿಜ್ಞಾನದಲ್ಲಿ ಡಾಕ್ಟರೇಟ್ ಪದವಿಯನ್ನು ಹೊಂದಿರಬೇಕು ಅಥವಾ ತತ್ಸಮಾನ ಪದವಿಯನ್ನು/ ಡಿಸಿಪ್ಲೆನ್ಸ್ ಅಥವಾ ಫೊರೆನ್ಸಿಕ್ ಮೆಡಿಸಿನಲ್ಲಿ ಎಂ.ಡಿ ಯನ್ನು ಹೊಂದಿರಬೇಕು.


ಅಸೋಸಿಯೇಟ್ ಪ್ರೊಫೆಸರ್/ರಿಡರ್ ಅಥವಾ ತತ್ಸಮಾನವಾದ ಕೇಡರ್ ಅಧಿಕಾರಿ ಆಗಿರಬೇಕು. ಜಂಟಿ ನಿರ್ದೇಶಕರು ನಿರ್ದಿಷ್ಟವಾದ ಇಲಾಖೆಯಲ್ಲಿ ರಾಜ್ಯ/ಕೇಂದ್ರ ಸರ್ಕಾರದ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿರಬೇಕು.

ಈ ನಿಯೋಜನೆಯು ಪ್ರಾರಂಭಿಕವಾಗಿ ಒಂದು ವರ್ಷದ ಅವಧಿಯದಾಗಿದ್ದು, ಬಳಿಕ ಅಗತ್ಯವಿದ್ದಲ್ಲಿ ಮುಂದುವರೆಸುವ ಬಗ್ಗೆ ಪರಿಶೀಲಿಸಲಾಗುವುದು. ಸದರಿ ಹುದ್ದೆಯಲ್ಲಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸಲು ಇಚ್ಛೆಯುಳ್ಳ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸರ್ಕಾರದ ಉಪ ಕಾರ್ಯದರ್ಶಿ ಮತ್ತು ಸದಸ್ಯ ಕಾರ್ಯದರ್ಶಿ, ಜಂಟಿ ನಿರ್ದೇಶಕರು ಹುದ್ದೆಗಳ ನೇಮಕಾತಿ ಸಮಿತಿ, ಒಳಾಡಳಿತ ಇಲಾಖೆ (ಪೊಲೀಸ್ ಸೇವೆಗಳು-ಎ) ಕೊಠಡಿ ಸಂಖ್ಯೆ: 222, 2ನೇ ಮಹಡಿ, ವಿಧಾನಸೌಧ, ಬೆಂಗಳೂರು-560001 ಇಲ್ಲಿಗೆ ತಮ್ಮ ಸೇವಾ ವಿವರಗಳೊಂದಿಗೆ ಅರ್ಜಿಯನ್ನು ಸಲ್ಲಿಸುವಂತೆ ಕೋರಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-12-2017

ಬುಧವಾರ, ಡಿಸೆಂಬರ್ 6, 2017

ಭಾರತೀಯ ನೌಕಾ ಸೇನೆ: ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಚೆಫ್, ಸ್ಟೀವರ್ಡ್, ಹೈಜೆನಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದ್ದು, ಎಸ್ ಎಸ್ ಎಲ್ ಸಿ ಪೂರೈಸಿದವರು ಅರ್ಜಿ ಸಲ್ಲಿಸಬಹುದಾಗಿದೆ.


ವೇತನ ಶ್ರೇಣಿ: ರೂ.14.600/- (ತರಬೇತಿ ವೇಳೆ), ರೂ.21700-69100/- (ಡಿಫೆನ್ಸ್ ಪೇ ಮೆಟ್ರಿಕ್ಸ್)

ಆಯ್ಕೆ ವಿಧಾನ

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು.


ಅರ್ಜಿ ಸಲ್ಲಿಕೆ
* ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
* ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ವೇಳೆ ತಮ್ಮ ಮೂಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಲು ಸೂಚಿಸಲಾಗಿದೆ.

ಪ್ರಮುಖ ದಿನಾಂಕಗಳು

* ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 04-12-2017
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-12-2017


ಹೆಚ್ಚಿನ ಮಾಹಿತಿಗಾಗಿ ಇಲ್ಲಿ  ಕ್ಲಿಕ್ ಮಾಡಿ: 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ: http://www.joinindiannavy.gov.in/

ಸೋಮವಾರ, ಡಿಸೆಂಬರ್ 4, 2017

ಹಾಸನ ನ್ಯಾಯಾಲಯ ನೇಮಕಾತಿ: 7ನೇ ತರಗತಿ ಆದವರಿಗೆ ಸೇವಕರ ಹುದ್ದೆಗಳು

ಹಾಸನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಖಾಲಿ ಇರುವ ಸೇವಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು 24 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದು, 7ನೇ ತರಗತಿ ಉತ್ತೀರ್ಣರಾಗಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿಸೆಂಬರ್ 21 ರೊಳಗೆ ಅರ್ಜಿಗಳನ್ನು ಸಲ್ಲಿಸತಕ್ಕದ್ದು.



ಹುದ್ದೆಯ ವಿವರ

ಸೇವಕರು-24 ಹುದ್ದೆಗಳು 

ವೇತನ ಶ್ರೇಣಿ:ರೂ.9600-14550/-

ವಿದ್ಯಾರ್ಹತೆ
* 7ನೇ ತರಗತಿ ತೇರ್ಗಡೆ ಹೊಂದಿರಬೇಕು
* ಕನ್ನಡದಲ್ಲಿ ಓದಲು ಹಾಗೂ ಬರೆಯಲು ತಿಳಿದಿರಬೇಕು

ವಯೋಮಿತಿ
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ (ಒಬಿಸಿ ಅಭ್ಯರ್ಥಿಗಳಿಗೆ 38, 
ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ 40 ವರ್ಷ)


ಅರ್ಜಿ ಸಲ್ಲಿಕೆ
* ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.200/-
* ಎಸ್.ಸಿ/ಎಸ್.ಟಿ/ಪ್ರ-1/ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/-
ಶುಲ್ಕವನ್ನು ಆನ್-ಲೈನ್ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ online payment through net banking / credit card / debit card/ Challan download ಸೌಲಭ್ಯದ ಮೂಲಕ ಪಾವತಿಸತಕ್ಕದ್ದು.

ಆಯ್ಕೆ ವಿಧಾನ
ನಿಗದಿಪಡಿಸಿದ ವಿದ್ಯಾರ್ಹತೆಯ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡವಾರುವಿನಲ್ಲಿ ಆಧಾರದ ಮೇಲೆ 1:10 (ಒಂದು ಹುದ್ದೆಗೆ 10 ಅಭ್ಯರ್ಥಿಗಳು) ಪ್ರಮಾಣದಲ್ಲಿ ಅಧಿಸೂಚನೆಯಲ್ಲಿ ಪ್ರಕಟಿಸಲಾದ ಖಾಲಿ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.

ಸಂದರ್ಶನವು ಹತ್ತು ಅಂಕಗಳನ್ನು ಒಳಗೊಂಡಿರುತ್ತದೆ. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.


ಪ್ರಮುಖ ದಿನಾಂಕಗಳು

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-12-2017
* ಶುಲ್ಕವನ್ನು ಚಲನ್ ಮೂಲಕ ಪಾವತಿಸಲು ಕೊನೆಯ ದಿನಾಂಕ: 23-12-2017

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: http://ecourts.gov.in/sites/default/files/Notificiation%205-2017_0.pdf
 ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ: http://recruitmenthck.kar.nic.in/district/has/gdp/notification.php


ಭಾನುವಾರ, ಡಿಸೆಂಬರ್ 3, 2017

ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ)-ಕೆ ಎಸ್ ಆರ್ ಪಿ 849 ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿನ ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ)-ಕೆ ಎಸ್ ಆರ್ ಪಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 849 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅಭ್ಯರ್ಥಿಗಳು ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್‍ಸೈಟ್ ನಲ್ಲಿ ಆನ್-ಲೈನ್ ಮುಖಾಂತರ ಮಾತ್ರ ಸಲ್ಲಿಸಲು ಅವಕಾಶವಿದೆ.


ಹುದ್ದೆಗಳ ವಿವರ

* ಪೊಲೀಸ್ ಕಾನ್ಸ್‌ಟೇಬಲ್ (ಕೆ ಎಸ್ ಆರ್ ಪಿ ) (ಪುರುಷ) - 834
* ಪೊಲೀಸ್ ಕಾನ್ಸ್‌ಟೇಬಲ್ (ಕೆ ಎಸ್ ಆರ್ ಪಿ ) (ಪುರುಷ) (ಹೈ-ಕ) - 15
ಒಟ್ಟು = 849

ವಿದ್ಯಾರ್ಹತೆ
ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ./ 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 08.12.2017ಕ್ಕೆ ಹೊಂದಿರಬೇಕು. (ಮಾಜಿ ಸೈನಿಕ ಅಭ್ಯರ್ಥಿಗಳು ವಿದ್ಯಾರ್ಹತೆಯ ಪ್ರಮಾಣ ಪತ್ರವನ್ನು ದಿನಾಂಕ: 08.12.2017 ರೊಳಗೆ ಹೊಂದಿದ್ದರೆ ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ಮಾತ್ರ ಪರಿಗಣಿಸಲಾಗುವುದು).

ವೇತನ ಶ್ರೇಣಿ; ರೂ.11600-21000/-


ವಯೋಮಿತಿ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 08.12.2017ಕ್ಕೆ ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷಗಳು.
* ಇತರೆ ಅಭ್ಯರ್ಥಿಗಳಿಗೆ 25 ವರ್ಷಗಳು.
* ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇರಲಿದೆ.

ಅರ್ಜಿ ಶುಲ್ಕ
* ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹250/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ₹100/-

ಪ್ರಮುಖ ದಿನಾಂಕಗಳ ಮಾಹಿತಿ
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20.11.2017 ಬೆಳಿಗ್ಗೆ 10.00 ಗಂಟೆಗೆ
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08.12.2017 ಸಂಜೆ 06.00 ಗಂಟೆಗೆ
* ಶುಲ್ಕವನ್ನು ಅಧಿಕೃತ ಬ್ಯಾಂಕ್ ಕಛೇರಿ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ: 12.12.2017.

ಸಹಾಯವಾಣಿ
ಅಭ್ಯರ್ಥಿಗಳು ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ)-ಕೆ ಎಸ್ ಆರ್ ಪಿ-2017 ನೇಮಕಾತಿ ಸಹಾಯವಾಣಿ ಸಂಖ್ಯೆ. 080-22943346 ನ್ನು ಸಂಪರ್ಕಿಸಿ ನೇಮಕಾತಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಸ್ಪಷ್ಠಪಡಿಸಿಕೊಳ್ಳಬಹುದು. (ದಿನಾಂಕ:20.11.2017ರಿಂದ ಪ್ರತಿದಿನ ಬೆಳಿಗ್ಗೆ 10-00 ರಿಂದ ಸಾಯಂಕಾಲ 6-00 ಗಂಟೆಯವರೆಗು)

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: http://srpc17.ksp-online.in/index.aspx?ReturnUrl=%2f
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ: http://srpc17.ksp-online.in/Instructions.aspx

ಕೆಎಸ್‍ಐಎಸ್‍ಎಫ್ 395 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿನ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ದಳ (ಕೆಎಸ್‍ಐಎಸ್‍ಎಫ್) ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್‍ಸೈಟ್ ನಲ್ಲಿ ಆನ್-ಲೈನ್ (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸಲು ಅವಕಾಶವಿದೆ.

ಹುದ್ದೆಗಳ ವಿವರ
* ಪೊಲೀಸ್ ಕಾನ್ಸ್‌ಟೇಬಲ್ (ಕೆಎಸ್‍ಐಎಸ್‍ಎಫ್) (ಪುರುಷ) - 356
* ಪೊಲೀಸ್ ಕಾನ್ಸ್‌ಟೇಬಲ್ (ಕೆಎಸ್‍ಐಎಸ್‍ಎಫ್) (ಮಹಿಳಾ) - 39
ಒಟ್ಟು = 395

ವಿದ್ಯಾರ್ಹತೆ
ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ./ 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 18.12.2017ಕ್ಕೆ ಹೊಂದಿರಬೇಕು. (ಮಾಜಿ ಸೈನಿಕ ಅಭ್ಯರ್ಥಿಗಳು ವಿದ್ಯಾರ್ಹತೆಯ ಪ್ರಮಾಣ ಪತ್ರವನ್ನು ದಿನಾಂಕ: 18.12.2017 ರೊಳಗೆ ಹೊಂದಿದ್ದರೆ ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ಮಾತ್ರ ಪರಿಗಣಿಸಲಾಗುವುದು)

ವೇತನ ಶ್ರೇಣಿ: ರೂ.11600-21000/-

ವಯೋಮಿತಿ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 18.12.2017ಕ್ಕೆ ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷಗಳು.
* ಇತರೆ ಅಭ್ಯರ್ಥಿಗಳಿಗೆ 25 ವರ್ಷಗಳು.
* ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇರಲಿದೆ.

ಅರ್ಜಿ ಶುಲ್ಕ
* ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹250/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ₹100/-

ಪ್ರಮುಖ ದಿನಾಂಕಗಳ ಮಾಹಿತಿ
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27.11.2017 ಬೆಳಿಗ್ಗೆ 10.00 ಗಂಟೆಗೆ
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18.12.2017 ಸಂಜೆ 06.00 ಗಂಟೆಗೆ
* ಶುಲ್ಕವನ್ನು ಅಧಿಕೃತ ಬ್ಯಾಂಕ್ ಕಛೇರಿ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ: 20.12.2017.

ಸಹಾಯವಾಣಿ
ಅಭ್ಯರ್ಥಿಗಳು ಪಿಸಿ (ಕೆಎಸ್‍ಐಎಸ್‍ಎಫ್)-2017 ನೇಮಕಾತಿ ಸಹಾಯವಾಣಿ ಸಂಖ್ಯೆ. 080-22943346 ನ್ನು ಸಂಪರ್ಕಿಸಿ ನೇಮಕಾತಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಸ್ಪಷ್ಠಪಡಿಸಿಕೊಳ್ಳಬಹುದು. (ದಿನಾಂಕ:27.11.2017ರಿಂದ ಪ್ರತಿದಿನ ಬೆಳಿಗ್ಗೆ 10-00 ರಿಂದ ಸಾಯಂಕಾಲ 6-00 ಗಂಟೆಯವರೆಗು)

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: http://sisfpc17.ksp-online.in/

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ: http://sisfpcper17.ksp-online.in/Instructions.aspx 



ಇಂಡಿಯನ್ ನೇವಿಯಲ್ಲಿ ಅರ್ಜಿ ಆಹ್ವಾನ... ಈ ಕೂಡಲೇ ಅರ್ಜಿ ಸಲ್ಲಿಸಿ!

ಇಂಡಿಯನ್ ನೇವಿ ನೇಮಕಾತಿ ಹುದ್ದೆಯ ಪ್ರಕಟಣೆ ಹೊರಡಿಸಿದೆ. ಕೆಡೆಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಜೂನ್ 21, 2018 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇಂಡಿಯ...