ಶನಿವಾರ, ಡಿಸೆಂಬರ್ 23, 2017

ಬಿಎಸ್ಎನ್ಎಲ್: 107 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಭಾರತ್ ಸಂಚಾರ್ ನಿಗಮ್ ಲಿಮೆಟೆಡ್ (ಬಿಎಸ್ಎನ್ಎಲ್) ಅಧಿಸೂಚನೆ ಹೊರಡಿಸಿದೆ.
107 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ ಜನವರಿ 15,2018ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.


ಹುದ್ದೆ : ಜೂನಿಯರ್ ಇಂಜಿನಿಯರ್
ಹುದ್ದೆ ಸ್ಥಳ : ಭಾರತದಾದ್ಯಂತ 
ವಯೋಮಿತಿ: 01.07.2016ಕ್ಕೆ ಅನ್ವಯವಾಗುವಂತೆ ಗರಿಷ್ಟ 55 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
 ವಿದ್ಯಾರ್ಹತೆ: ಬಿಇ/ಬಿಟೆಕ್ ಅಥವಾ ತತ್ಸಮಾನ ಪದವಿಯನ್ನು ಟೆಲಿಕಾಂ/ಇಲೆಕ್ಟ್ರಾನಿಕ್ಸ್/ರೇಡಿಯೋ/ಕಂಪ್ಯೂಟರ್/ಎಲೆಕ್ಟ್ರಿಕಲ್/ ಮಾಹಿತಿ ತಂತ್ರಜ್ಞಾನ/ ಇನ್ಸ್ಟ್ರುಮೆಂಟೆಷನ್ ಇಂಜಿನಿಯರಿಂಗ್ ಅಥವಾ ಎಂಎಸ್ಸಿ (ಎಲೆಕ್ಟ್ರಾನಿಕ್ಸ್/ ಕಂಪ್ಯೂಟರ್ಸ್ ಸೈನ್ಸ್)

ಪ್ರಮುಖ ದಿನಾಂಕಗಳು
* ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-01-2018
* ತಿದ್ದುಪಡಿ ದಿನಾಂಕ: 16-01-2018 ರಿಂದ 17-01-2018* ಆನ್ಲೈನ್ ಪರೀಕ್ಷೆ ನಡೆಯುವ ದಿನಾಂಕ: 28-01-2018

ಪರೀಕ್ಷೆ ವಿವರ
ನೂರು ಅಂಕಗಳ ಈ ಪರೀಕ್ಷೆಯು ಎರಡು ಪ್ರಶ್ನೆಪತ್ರಿಕೆಗಳನ್ನು ಒಳಗೊಂಡಿರುತ್ತದೆ. ಉತ್ತರಿಸಲು ಮೂರು ಗಂಟೆಯ ಕಾಲಾವಕಾಶ ನೀಡಲಾಗುತ್ತದೆ.
* ಮೊದಲ ಪತ್ರಿಕೆ: ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ (50 ಅಂಕಗಳು)
* ಎರಡನೇ ಪತ್ರಿಕೆ: ಡಿಪಾರ್ಟ್ಮೆಂಟಲ್ ಪ್ರಾಕ್ಟೀಸ್ (50 ಅಂಕಗಳು)

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಶುಲ್ಕ
* ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.500/-
* ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ರೂ. 250/-

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: http://www.internalbsnlexam.com/advertisement/model_notification_LICEJE.pdf
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ:http://www.internalexam.bsnl.co.in/

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಇಂಡಿಯನ್ ನೇವಿಯಲ್ಲಿ ಅರ್ಜಿ ಆಹ್ವಾನ... ಈ ಕೂಡಲೇ ಅರ್ಜಿ ಸಲ್ಲಿಸಿ!

ಇಂಡಿಯನ್ ನೇವಿ ನೇಮಕಾತಿ ಹುದ್ದೆಯ ಪ್ರಕಟಣೆ ಹೊರಡಿಸಿದೆ. ಕೆಡೆಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಜೂನ್ 21, 2018 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇಂಡಿಯ...