ಸೋಮವಾರ, ಡಿಸೆಂಬರ್ 4, 2017

ಹಾಸನ ನ್ಯಾಯಾಲಯ ನೇಮಕಾತಿ: 7ನೇ ತರಗತಿ ಆದವರಿಗೆ ಸೇವಕರ ಹುದ್ದೆಗಳು

ಹಾಸನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಖಾಲಿ ಇರುವ ಸೇವಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು 24 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದು, 7ನೇ ತರಗತಿ ಉತ್ತೀರ್ಣರಾಗಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿಸೆಂಬರ್ 21 ರೊಳಗೆ ಅರ್ಜಿಗಳನ್ನು ಸಲ್ಲಿಸತಕ್ಕದ್ದು.



ಹುದ್ದೆಯ ವಿವರ

ಸೇವಕರು-24 ಹುದ್ದೆಗಳು 

ವೇತನ ಶ್ರೇಣಿ:ರೂ.9600-14550/-

ವಿದ್ಯಾರ್ಹತೆ
* 7ನೇ ತರಗತಿ ತೇರ್ಗಡೆ ಹೊಂದಿರಬೇಕು
* ಕನ್ನಡದಲ್ಲಿ ಓದಲು ಹಾಗೂ ಬರೆಯಲು ತಿಳಿದಿರಬೇಕು

ವಯೋಮಿತಿ
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ (ಒಬಿಸಿ ಅಭ್ಯರ್ಥಿಗಳಿಗೆ 38, 
ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ 40 ವರ್ಷ)


ಅರ್ಜಿ ಸಲ್ಲಿಕೆ
* ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.200/-
* ಎಸ್.ಸಿ/ಎಸ್.ಟಿ/ಪ್ರ-1/ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/-
ಶುಲ್ಕವನ್ನು ಆನ್-ಲೈನ್ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ online payment through net banking / credit card / debit card/ Challan download ಸೌಲಭ್ಯದ ಮೂಲಕ ಪಾವತಿಸತಕ್ಕದ್ದು.

ಆಯ್ಕೆ ವಿಧಾನ
ನಿಗದಿಪಡಿಸಿದ ವಿದ್ಯಾರ್ಹತೆಯ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡವಾರುವಿನಲ್ಲಿ ಆಧಾರದ ಮೇಲೆ 1:10 (ಒಂದು ಹುದ್ದೆಗೆ 10 ಅಭ್ಯರ್ಥಿಗಳು) ಪ್ರಮಾಣದಲ್ಲಿ ಅಧಿಸೂಚನೆಯಲ್ಲಿ ಪ್ರಕಟಿಸಲಾದ ಖಾಲಿ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.

ಸಂದರ್ಶನವು ಹತ್ತು ಅಂಕಗಳನ್ನು ಒಳಗೊಂಡಿರುತ್ತದೆ. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.


ಪ್ರಮುಖ ದಿನಾಂಕಗಳು

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-12-2017
* ಶುಲ್ಕವನ್ನು ಚಲನ್ ಮೂಲಕ ಪಾವತಿಸಲು ಕೊನೆಯ ದಿನಾಂಕ: 23-12-2017

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: http://ecourts.gov.in/sites/default/files/Notificiation%205-2017_0.pdf
 ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ: http://recruitmenthck.kar.nic.in/district/has/gdp/notification.php


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಇಂಡಿಯನ್ ನೇವಿಯಲ್ಲಿ ಅರ್ಜಿ ಆಹ್ವಾನ... ಈ ಕೂಡಲೇ ಅರ್ಜಿ ಸಲ್ಲಿಸಿ!

ಇಂಡಿಯನ್ ನೇವಿ ನೇಮಕಾತಿ ಹುದ್ದೆಯ ಪ್ರಕಟಣೆ ಹೊರಡಿಸಿದೆ. ಕೆಡೆಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಜೂನ್ 21, 2018 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇಂಡಿಯ...